ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಸುಧಾ ಯಾದವ್ ಪ್ರಮಾಣವಚನ

1 ನಿಮಿಷ ಓದು · ನವೀಕರಿಸಲಾಗಿದೆ 30 ವೀಕ್ಷಣೆ
WhatsApp
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಸುಧಾ ಯಾದವ್ ಪ್ರಮಾಣವಚನ

ಬೆಂಗಳೂರು: ಅ. 16: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾ. ವಿಭು ಬಖ್ರು ಅವರು ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿದ್ದರು. ಐದು ವರ್ಷಗಳ ಕಾಲ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.

ಜಾಹೀರಾತು
AdSense · in-feed

ಸಂಬಂಧಿತ ಲೇಖನಗಳು